ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್‍ರವರು ತೆರಿಗೆ ಕಟ್ಟಲು ಆಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟಲು ಬಹುತೇಕ ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಾಕ್‍ಡೌನ್ ಕೇವಲ ಜನ ಸಾಮಾನ್ಯರ ಮೇಲಷ್ಟೇ ಅಲ್ಲದೆ ಸೆಲೆಬ್ರೆಟಿಗಳ ಜೀವನದ ಮೇಲೂ ಹೊಡೆತ ಬಿದ್ದಿದೆ. ಅನೇಕ ಕಲಾವಿರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸದ್ಯ ಬಾಲಿವುಡ್ ನಟಿ ಕಂಗನಾ ರಣಾವತ್ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಒಂದು ಸಿನಿಮಾಗೆ ಏನಿಲ್ಲ ಅಂದರೂ ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿದ್ದರೂ ಕಂಗನಾ ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಪಾವತಿ ಮಾಡಿದ್ದು, ಈ ಬಾರಿ ನನಗೆ ತೆರಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ

ಈ ಕುರಿತಂತೆ ನಟಿ ಕಂಗನಾ ರಣಾವತ್‍ರವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ, ನನ್ನ ಒಟ್ಟು ಆದಾಯದಲ್ಲಿ ಶೇ. 45ರಷ್ಟು ತೆರಿಗೆ ಪಾವತಿಸುತ್ತೇನೆ. ನಾನು ಅತೀ ಹೆಚ್ಚು ತೆರಿಗೆ ಪಾವತಿಸುವ ನಟಿಯಾಗಿದ್ದೇನೆ. ಆದರೆ ಕೆಲಸ ಇಲ್ಲದೆ, ಕಳೆದ ವರ್ಷ ಅರ್ಧದಷ್ಟು ತೆರಿಗೆಯನ್ನು ಪಾವತಿಸಿದ್ದೇನೆ. ಇದೀಗ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿದ್ದು, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಎಂದಿದ್ದಾರೆ.

ನಾನು ತೆರಿಗೆ ಪಾವತಿಸುವುದು ತಡ ಮಾಡಿದರೆ ಸರ್ಕಾರ ನನಗೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮ್ಮೆಲ್ಲರಿಗೂ ಕಠಿಣವಾಗಿರಬಹುದು. ಆದರೆ ಎಲ್ಲರೂ ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು ಎಂದು ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಕೊರೊನಾ ವೈರಸ್‍ನ್ನು ನಾನು ಹೊಡೆದೋಡಿಸಿದೆ: ಕಂಗನಾ

The post ತೆರಿಗೆ ಕಟ್ಟಲು ಆಗ್ತಿಲ್ಲ – ಅಳಲು ತೋಡಿಕೊಂಡ ಕಂಗನಾ appeared first on Public TV.

Source: publictv.in

Source link