ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ | 80 year old man dies and 3 others injured when the detachable battery of electric scooter Explodes In Telangana


ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ಪ್ರಾತಿನಿಧಿಕ ಚಿತ್ರ

ಹೈದರಾಬಾದ್: ತೆಲಂಗಾಣದ (Telangana) ನಿಜಾಮಾಬಾದ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಚಾರ್ಜ್‌ನಲ್ಲಿ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ (electric scooter)  ಡಿಟ್ಯಾಚೇಬಲ್ ಬ್ಯಾಟರಿ (detachable battery) ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 80 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಬ್ಯಾಟರಿ ಚಾರ್ಜ್ ಮಾಡುವಾಗ ಈ ಘಟನೆ ನಡೆದಿದೆ. ರಾಮಸ್ವಾಮಿ ಎಂಬ ವ್ಯಕ್ತಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಇವರನ್ನು ರಕ್ಷಿಸಲು ಯತ್ನಿದ್ದ ಮಗ ಪ್ರಕಾಶ್, ಪತ್ನಿ ಕಮಲಮ್ಮ ಮತ್ತು ಸೊಸೆ ಕೃಷ್ಣವೇಣಿ ಗಾಯಗೊಂಡಿದ್ದಾರೆ. ಪ್ರಕಾಶ್ ಒಂದು ವರ್ಷದಿಂದ ಇವಿ ಸ್ಕೂಟರ್ ಬಳಸುತ್ತಿದ್ದರು ಎನ್ನಲಾಗಿದೆ. ಪ್ಯೂರ್ ಇವಿ ತಯಾರಕರ ವಿರುದ್ಧ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್  ಆಗಲಿದೆ)

TV9 Kannada


Leave a Reply

Your email address will not be published.