ತೆಲಂಗಾಣದಲ್ಲಿ ಪಾದಯಾತ್ರೆ ವೇಳೆ ಮೇಕೆ ಮರಿಯನ್ನು ಹೆಗಲ ಮೇಲೆ ಹೊತ್ತು ನಡೆದ ರಾಹುಲ್ ಗಾಂಧಿ! – Congress Leader Rahul Gandhi Hold Goat on Shoulder during Bharat Jodo Yatra in Telangana



ತಮ್ಮ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಹೆಗಲ ಮೇಲೆ ಮೇಕೆಯ ಮರಿಯನ್ನು ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

TV9kannada Web Team


| Edited By: Sushma Chakre

Oct 29, 2022 | 4:42 PM




ಭಾರತ್ ಜೋಡೋ ಯಾತ್ರೆ ಪ್ರಯುಕ್ತ ತೆಲಂಗಾಣದಲ್ಲಿರುವ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ಬುಡಕಟ್ಟು ಸಮುದಾಯದವರ ಜೊತೆ ಅವರ ನೃತ್ಯಕ್ಕೆ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ (Video Viral) ಆಗಿತ್ತು. ಅದರ ಜೊತೆಗೆ ಇನ್ನೊಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ತಮ್ಮ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಹೆಗಲ ಮೇಲೆ ಮೇಕೆಯ ಮರಿಯನ್ನು ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆಂಧ್ರಪ್ರದೇಶ, ಕರ್ನಾಟಕ ಮತ್ತು ಕೇರಳಕ್ಕೆ ಭೇಟಿ ನೀಡಿದ ನಂತರ ಈ ವಾರ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ಯಾತ್ರೆ’ಯನ್ನು (Bharat Jodo Yatra) ನಡೆಸುತ್ತಿರುವ ರಾಹುಲ್ ಗಾಂಧಿ ಅಲ್ಲಿನ ಜನರ ಜೊತೆ ಬೆರೆತು ಹೆಜ್ಜೆ ಹಾಕುತ್ತಿದ್ದಾರೆ.

TV9 Kannada


Leave a Reply

Your email address will not be published.