ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯ ಜನರಿಗೆ ತಪ್ಪು ಮಾಹಿತಿ, ಸುಳ್ಳು ಸಂದೇಶ ರವಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಮನೋಹತ್ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಿದ್ದಾರೆ. ಅಲ್ಲದೇ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಸತೀಶ್ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮನೋಹರ್.. ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ಬಿಬಿಎಂಪಿ ಆಯುಕ್ತರನ್ನ ಭೇಟಿಯಾಗಿ ದೂರು ನೀಡಿದ್ದಾರೆ. ದೂರು ನೀಡಿದ ನಂತರ ತೇಜಸ್ವಿ ಸೂರ್ಯ ರಾಜೀನಾಮೆಗೂ ಮನೋಹರ್ ಒತ್ತಾಯಿಸಿದ್ದಾರೆ.

 

The post ತೇಜಸ್ವಿ ಸೂರ್ಯ ತಪ್ಪು ಮಾಹಿತಿ ನೀಡಿದ್ದಾರೆ.. ಬಿಬಿಎಂಪಿ ಆಯುಕ್ತರಿಗೆ ದೂರು ನೀಡಿದ ಕೈ ಮುಖಂಡ appeared first on News First Kannada.

Source: newsfirstlive.com

Source link