ಬೆಂಗಳೂರು: ಹತ್ಯೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ (Congress Government) ಇದ್ದಿದ್ರೆ ಕಲ್ಲು ಹೊಡೆಯಬಹುದಾಗಿತ್ತು ಎಂಬ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗಿರಿನಗರದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಲ್ಲುಗಳನ್ನು ಮತ್ತು ಹೂಗಳನ್ನು ನೀಡುವ ಮೂಲಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇನ್ನು ಸಂಸದರ ಮನೆಗೆ ಬಂದು ಹೂ ನೀಡಲು ಮುಂದಾಗಿದ್ದ ಕಾರ್ಯಕರ್ತೆಯನ್ನು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ