ಬೆಂಗಳೂರು: ತೌಕ್ತೆ ಚಂಡಮಾರುತದ ಅಬ್ಬರ ಕೇರಳ ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದರ ನಡುವೆಯೇ ತೌಕ್ತೆ ಅಬ್ಬರಕ್ಕೆ ಸಿಲುಕಿದ್ದ ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದು, ಎನ್‍ಡಿಆರ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಈ ನಡುವಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ರಾಜ್ಯದ ಪರವಾಗಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತ ಎಫೆಕ್ಟ್ ಹೆಚ್ಚಾಗಿದೆ. ಈ ಹಿನ್ನೆಲ್ಲೆ ರಾಜ್ಯ ಸರ್ಕಾರ ಚಂಡಮಾರುತ ಎದುರಿಸಲು ಸರ್ವ ರೀತಿಯಲ್ಲಿ ಸಜ್ಜಾಗಿದ್ದು, ಒಟ್ಟು 1 ಸಾವಿರ ಸಿಬ್ಬಂದಿಯನ್ನು ಚಂಡಮಾರುತ ಎದುರಿಸಲು ನಿಯೋಜಿಸಲಾಗಿದೆ. ಎಸ್‍.ಡಿ.ಆರ್.ಎಫ್, ಎನ್‍.ಡಿ.ಆರ್.ಎಫ್ ತಂಡಗಳನ್ನು ಕರಾವಳಿಯ 3 ಜಿಲ್ಲೆಗಳಿಗೆ ನಿಯೋಜನೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

The post ತೌಕ್ತೆ ಅಬ್ಬರ: ರಾಜ್ಯದ ಕರಾವಳಿ ಜಿಲ್ಲೆಗಳ ಮಾಹಿತಿ ಪಡೆದ ಜೆ.ಪಿ ನಡ್ಡಾ appeared first on News First Kannada.

Source: newsfirstlive.com

Source link