ಉಡುಪಿ: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತ ಪರಿಣಾಮದಿಂದ ಕರಾವಳಿಯಲ್ಲಿ ಬಿರುಸಿನ ಮಳೆಯಾಗುತ್ತಿದೆ. ಈ ನಡುವೆ ಚಂಡಮಾರುತ ತೀವ್ರತೆ ಹೆಚ್ಚಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಡ ಕಿರಿಮಂಜೇಶ್ವರ ಗ್ರಾಮದಲ್ಲಿ ದಾಖಲೆಯ 300 ಮಿ.ಮೀ ಮಳೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲಿ ಸತತ ಎರಡು ದಿನಗಳಿಂದ ಒಟ್ಟು 75 ಮಿಲಿ ಮೀಟರ್ ಮಳೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಚಂಡಮಾರುತದಿಂದ ಜಿಲ್ಲೆಯಲ್ಲಿ 76 ಮನೆ ಭಾಗಶಃ ಹಾನಿಯಾಗಿದ್ದು, 7 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಈಗಾಗಲೇ 60 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಕರಾವಳಿಯ 5 ಕಿಲೋ ಮೀಟರ್ ಉದ್ದಕ್ಕೂ ಕಡಲ್ಕೊರೆತ ಹೆಚ್ಚಾಗಿದ್ದು,2 ಕಿಲೋ ಮೀಟರ್ ಮೀನುಗಾರಿಕಾ ರಸ್ತೆಗೆ ಹಾನಿಯಾಗಿದೆ. 8 ಸೇತುವೆ, 100ಕ್ಕೂ ಅಧಿಕ ವಿದ್ಯುತ್ ಕಂಬ, 8 ಟ್ರಾನ್ಸ್ ಫಾರ್ಮರ್, 18 ಮೀನುಗಾರಿಕಾ ಬೋಟುಗಳಿಗೆ ಹಾನಿಯಾಗಿದೆ. ಭಾರೀ ಮಳೆಗೆ ಜನ ಜೀವನ ಹಲವು ಭಾಗಗಳಲ್ಲಿ ಅಸ್ತವ್ಯಸ್ತಗೊಂಡಿದೆ.

The post ತೌಕ್ತೆ ಎಫೆಕ್ಟ್: ಉಡುಪಿಯ ನಾಡ ಕಿರಿಮಂಜೇಶ್ವರನಲ್ಲಿ ದಾಖಲೆಯ 300ಮಿ.ಮೀ ಮಳೆ appeared first on News First Kannada.

Source: newsfirstlive.com

Source link