ಮಂಗಳೂರು: ತೌಕ್ತೆ ಚಂಡಮಾರುತದ ಎಫೆಕ್ಟ್​ಗೆ ಕರಾವಳಿಯಲ್ಲಿ ಕಡಲು ಅಬ್ಬರಿಸುತ್ತಿದೆ. ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ. ಈ ನಡುವೆ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೂವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿ ಸುಕ್ಷಿತವಾಗಿ ದಡ ಮುಟ್ಟಿಸಿದ್ದಾರೆ.

ಚಂಡಮಾರುತದ ಕುರಿತು ಎಚ್ಚರಿಕೆ ನೀಡಿದ್ದರೂ ಕೂಡ ಕೇರಳದ ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಕೇರಳದ ಕಣ್ಣೂರು ಕಡಲ ತೀರದಿಂದ 10 ನಾಟಿಕಲ್ ಮೈಲ್ ದೂರದಲ್ಲಿ ಮೀಗಾರಿಕೆಗೆ ತೆರಳಿದ್ದ ವೇಳೆ ಬೋಟ್‍ನ ಎಂಜಿನ್ ಅಳಗಿ ಬೋಟ್‍ನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು.

ಮಂಗಳೂರಿನಿಂದ ಹೊರಟಿದ್ದ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಶಿಪ್‍ನ ಸಿಬ್ಬಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ತಡರಾತ್ರಿ ಆಳ ಸಮುದ್ರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

The post ತೌಕ್ತೆ ಸುಳಿಗೆ ಸಿಕ್ಕಿದ್ದ ಕೇರಳ ಮೀನುಗಾರರ ರಕ್ಷಿಸಿದ ಕೋಸ್ಟ್​ ಗಾರ್ಡ್​ ಸಿಬ್ಬಂದಿ appeared first on News First Kannada.

Source: newsfirstlive.com

Source link