ದಕ್ಷಿಣ ಕನ್ನಡದಲ್ಲಿ ಅಶಕ್ತರ ಮನೆಗೆ ತೆರಳಿ ಲಸಿಕೆ- ಜಿಲ್ಲಾಡಳಿತ ನಿರ್ಧಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ತೆರಳಿ ಲಸಿಕೆ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ.

ನೀವು ಮನೆಯಲ್ಲೇ ಲಸಿಕೆ ಪಡೆಯಲು ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಣಿಯಾದ ಬಳಿಕ ದಿನ ನಿಗದಿಪಡಿಸಿ, ಮನೆ ಮನೆಗೆ ಬಂದು ಲಸಿಕೆ ನೀಡಲು ನಿರ್ಧರಿಸಲಾಗಿದೆ. ಮನೆ ಮನೆ ಲಸಿಕಾ ವಾಹನಕ್ಕೆ ಜೂ.19ರಂದು ಬೆಳಗ್ಗೆ 9.30ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುತ್ತಿದೆ.

The post ದಕ್ಷಿಣ ಕನ್ನಡದಲ್ಲಿ ಅಶಕ್ತರ ಮನೆಗೆ ತೆರಳಿ ಲಸಿಕೆ- ಜಿಲ್ಲಾಡಳಿತ ನಿರ್ಧಾರ appeared first on Public TV.

Source: publictv.in

Source link