ಮಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ ಬಳಿಕ ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಸಂಜೆ ವರುಣ ಅಬ್ಬರಿಸಿ ಬೊಬ್ಬಿರಿದಿದೆ.

ಮಂಗಳೂರು ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲೂ ಬಿರುಗಾಳಿ ಸಹಿತ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಭಾರೀ ಗಾಳಿ ಬೀಸಿದ್ದು, ಮಳೆಯ ಅಬ್ಬರವೂ ಕೆಲ ಗಂಟೆಗಳ ಕಾಲ ಹೆಚ್ಚಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಮೂರು ದಿನಗಳ ಕಾಲ ಜಿಲ್ಲಾದ್ಯಂತ ಎಲ್ಲೋ ಅಲರ್ಟ್ ಘೋಷಿಸಿಲಾಗಿದೆ. ಗಾಳಿಯ ರಭಸ ಹೆಚ್ಚಾಗಿರುವುದರಿಂದ ನದಿ ಹಾಗೂ ಸಮದ್ರ ತೀರದ ಜನ ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಾಫಿನಾಡಿನಲ್ಲಿ ಭಾರೀ ಮಳೆ
ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದ್ದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸಂಜೆ ವೇಳೆಗೆ ವರುಣದೇವ ಅಬ್ಬರಿಸಿ ಬೊಬ್ಬರಿದಿದ್ದಾನೆ. ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆಗಾಗ್ಗೆ 15-20 ನಿಮಿಷಗಳ ಕಾಲ ತುಂತುರು ಮಳೆ ಸುರಿಯುತ್ತಿತ್ತು. ಆದರೆ ಸಂಜೆ ವೇಳೆಗೆ ಚಿಕ್ಕಮಗಳೂರು ನಗರದಲ್ಲೂ ಭಾರೀ ಮಳೆಯಾಗದೆ.

ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಹಾಗೂ ಬಾಳೆಹೊನ್ನೂರಿನಲ್ಲೂ ಬೆಳಗ್ಗೆಯಿಂದ ಮೋಡಕವಿದ ವಾತಾವರಣವಿತ್ತು. ಆದರೆ, ಸಂಜೆ ವೇಳೆಗೆ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿದಿದೆ. ಕತ್ತಲಾಗುತ್ತಿದ್ದಂತೆ ಮಳೆರಾಯನ ಅಬ್ಬರ ಕಂಡು ಮಲೆನಾಡಿಗರು ಬೆಚ್ಚಿಬಿದ್ದಿದ್ದಾರೆ. ಭಾರೀ ಗುಡುಗು-ಸಿಡಿಲಬ್ಬರದ ಮಳೆಯಿಂದ ರಸ್ತೆ ಬದಿಯ ಮರಗಳು ಧರೆಗುರುಳಿವೆ. ಮರದ ರಂಬೆಕೊಂಬೆಗಳು ರಸ್ತೆ ಬದಿಯ ಮರಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ಹರಿದು ಬಿದ್ದಿದೆ. ಮಲೆನಾಡ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.

ಮಳೆಗಾಗಿ ಆಕಾಶ ನೋಡುತ್ತಿದ್ದ ರೈತರ ಹಾಗೂ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದರ ಜೊತೆಗೆ ಮಳೆ ಅಂದರೆ ಮಲೆನಾಡಿಗರಿಗೆ ಭಯ ಕೂಡ ಕಾಡುತ್ತಿದೆ. ಕಳೆದ ಎರಡ್ಮೂರು ವರ್ಷಗಳಲ್ಲಿ ಸುರಿದ ಮಳೆಯಿಂದಾದ ಅನಾಹುತಗಳಿಂದ ಜನ ಇಂದಿಗೂ ಹೊರಬಂದಿಲ್ಲ. ಇದೀಗ ಮಳೆ ಮತ್ತೆ ಸುರಿಯಲಾರಂಭಿಸಿದೆ.

The post ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ appeared first on Public TV.

Source: publictv.in

Source link