ಮಂಗಳೂರು: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಪೊಲೀಸರು ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ನಾಡು ಕೈಗಾರಿಕಾ ಪ್ರದೇಶದ ರಾಮ್ ಕಿ ಬಯೋ ಮೆಡಿಕಲ್ ವೆಸ್ಟ್ ಟ್ರೀಟ್ಮೆಂಟ್ ಕಂಪನಿಯಲ್ಲಿ ನಡೆಯಿತು.

ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಗ್ರಾಮಾಂತರ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಪತ್ತೆಯಾದ ಸುಮಾರು ಐವತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಸುಮಾರು 50 ಪ್ರಕರಣಕ್ಕೆ ಸಂಬಂಧಪಟ್ಟಂತೆ 130ಕೆಜಿಗೂ ಹೆಚ್ಚು ಗಾಂಜಾ, ಕೋಕೆನ್, ಚರಸ್ ಸಹಿತ ಹತ್ತು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಲಾಕ್‍ಡೌನ್ ಇದ್ರೂ ಮಾದಕ ವಸ್ತುಗಳ ಜಾಲ ಪತ್ತೆ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ 5 ಪ್ರಕರಣಕ್ಕೆ ಸಂಬಂಧಪಟ್ಟಂತೆ 224 ಕೆಜಿ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ 89 ಮಾದಕ ವಸ್ತುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ 153 ಜನರನ್ನು ದಸ್ತಗಿರಿ ಮಾಡಲಾಗಿದೆ. 383 ಕೆಜಿ ಮಾದಕ ವಸ್ತುಗಳನ್ನು ಆಗಾಗ ನಾಶಪಡಿಸಲಾಗಿದೆ.

The post ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಪಡಿಸಿದ್ದ 50 ಲಕ್ಷ ಮೌಲ್ಯದ ಮಾದಕ ವಸ್ತುಗಳ ನಾಶ appeared first on Public TV.

Source: publictv.in

Source link