ತಮಿಳುನಾಡಿನಿಂದ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಬಂದಿದ್ದು, ರಜಿನಿಕಾಂತ್ ಕುಟುಂಬಕ್ಕೆ ಡಿವೋರ್ಸ್ ಸಿಡಿಲು ಬಂದಪ್ಪಳಿಸಿದೆ. ಸೈಲೆಂಟ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಧನುಷ್ ಹಾಗೂ ರಜಿನಿಕಾಂತ್ ಪುತ್ರಿ 18 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಈಗ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರೂ ಬೇರೆ ಬೇರೆಯಾಗುತ್ತಿರೋದಾಗಿ ಧನುಷ್ ಮಾಹಿತಿ ನೀಡಿದ್ದಾರೆ.
‘ನಾವು ಬೇರೆಯಾಗುತ್ತಿದ್ದೇವೆ’
18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಗಳಂತೆ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿದ್ದೆವು. ನಮ್ಮ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ. ಇಂದು ನಾವು ನಮ್ಮ ಮಾರ್ಗಗಳನ್ನು ಪ್ರತ್ಯೇಕಗೊಳಿಸುವ ಜಾಗದಲ್ಲಿ ಬಂದು ನಿಂತಿದ್ದೇವೆ. ಜೋಡಿಯಾಗಿದ್ದ ನಾವು ಬೇರೆಯಾಗಲು ಮತ್ತು ನಮ್ಮನ್ನು ನಾವು ಇನ್ನಷ್ಟು ಚೆನ್ನಾಗಿ ಅರ್ಥೈಸಿಕೊಳ್ಳಲು, ಸಮಯ ಕೊಡಲು ನಾನು ಮತ್ತು ಐಶ್ವರ್ಯ ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಮತ್ತು ಇದನ್ನು ನಿಭಾಯಿಸಲು ನಮಗೆ ಬೇಕಿರುವ ಗೌಪ್ಯತೆಯನ್ನು ನೀಡಿ. ಓಂ ನಮಃ ಶಿವಾಯ.
ಧನುಷ್, ನಟ
— Dhanush (@dhanushkraja) January 17, 2022
The post ‘ದಯವಿಟ್ಟು ನಮ್ಮ ನಿರ್ಧಾರ ಗೌರವಿಸಿ’: ಡಿವೋರ್ಸ್ ಬಳಿಕ ಧನುಷ್ ಫ್ಯಾನ್ಸ್ಗೆ ಏನಂದ್ರು..? appeared first on News First Kannada.