ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕಳೆದ ಕೆಲ ದಿನಗಳಿಂದ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಹಿರಿಯ ನಟ ಜಗ್ಗೇಶ್ ಅವರು, ಉದ್ಯಮ ಹಿರಿಯರು ಹಾಗೂ ವಾಣಿಜ್ಯ ಮಂಡಲಿ ಮಧ್ಯಪ್ರವೇಶಿಸಿ ಒಡೆದ ಮನಗಳ ಸರಿಮಾಡಿ ಎಂದು ಪ್ರಾರ್ಥನೆ ಮಾಡಿದ್ದಾರೆ.

ನಟ ಜಗ್ಗೇಶ್​ ಫೇಸ್​​ಬುಕ್​​ ಪೋಸ್ಟ್​..​
ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ ಹೋಬಳಿಯ,ಆನಡುಗು ಎಂಬ ಸಣ್ಣ ಗ್ರಾಮದ, ಸಣ್ಣ ಕುಟುಂಬದ, ಹಳ್ಳಿಹುಡುಗ ನಾನು ಈಶ್ವರ್ ಗೌಡ ಜಗ್ಗೇಶ..!

ನನಗೆ ಇದ್ದ ಆಸೆ ರಾಜಕುಮಾರ್ ಕಂಡು ಮಾತಾಡಿಸಿ ಆಶೀರ್ವಾದ ಪಡೆದು ಸಿನಿಮ ನಟನಾಗ ಬೇಕು ಎಂಬುದು ಒಂದೆ ಗುರಿ!1980ಕ್ಕೆ ಆ ಕಾರ್ಯ ಶುರು, ಆಗ ಹೇಗಿದ್ದೆ ನಾನು ದಾಖಲಿಸಿರುವೆ ಚಿತ್ರಗಳಲ್ಲಿ ಮತ್ತೊಮ್ಮೆ ಮುಖ ನೋಡಿ ನಕ್ಕುಬಿಡಿ! ಆ ಮುಖಕ್ಕೆ ಆಕಾಲಕ್ಕೆ ಸಿನಿಮಾ ನಟ ಆಗುವ ಕನಸ್ಸು? ಈಗಿನ ಜಗ್ಗೇಶನ ಮರೆತು ಯೋಚಿಸಿ ಇದು ಸಾಧ್ಯವಾ?

ಆಗ ಅಪ್ಪಅಮ್ಮ ಬಂಧು ಮಿತ್ರರು ಹೇಳಿದ್ದು, ಉಗಿದದ್ದು ಹೀಗೆ ಮುಚ್ಕೊಂಡು ಅನ್ನ ಹುಡ್ಕೋ ಕ್ಯಾಮೆ ನೋಡು! ಶಿವಲಿಂಗಪ್ಪನ ಮರ್ಯಾದೆ ಉಳಿಸು ಮಂಗಮುಂಡೆದೆ ಎಂದು!

ಗುರುಹಿಂದೆ ಗುರಿಮಂದೆ ಹಠ ಬಿಡಲಿಲ್ಲಾ ಗಾಂಧಿನಗರ ಅಲೆದು ಚಪ್ಪಲಿಸವೆಸಿ ದಡಮುಟ್ಟಿದೆ ಎಂದುಬಿಟ್ಟರೆ ಆತ್ಮ ಧ್ರೋಹ ಆಗಿಬಿಡುತ್ತದೆ ಕಾರಣ ದಡಮುಟ್ಟಿಸಿದ್ದು ಅಂದಿನ ನಿರ್ದೇಶಕರು ನಿರ್ಮಾಪಕರು ಮಾಧ್ಯಮಮಿತ್ರರು ಹಾಗು ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು!ಹೇಳಿ ಹೇಗಿದ್ದರಬೇಕು ಅಪಮಾನ ಅವಮಾನ ಹಸಿವಿನಿಂದ ನಿದ್ರೆಗೆಟ್ಟು ಗೆದ್ದ ಒಬ್ಬ ಸಾಮಾನ್ಯನ ಬದುಕು!ಆಗ ನಮ್ಮ ಬಗ್ಗೆ ಹೇಳಲು ಇದ್ದದ್ದು ಒಂದೆ ಬರಹಮಾಧ್ಯಮ ಮಾತ್ರ! ನೆನಪಿಡಿ ಇಂದು ನೂರಾರು ಮಾಧ್ಯಮ, ಅಂಗೈಯಲ್ಲೆ ಆಕಾಶ ತೋರಿ ಹತ್ತಾರುವರ್ಷ ಸಾಧನೆ ಕ್ಷಣಮಾತ್ರದಲ್ಲೆ ಅನುಮಾನದಿಂದ ಸಾಧಕನ ನೋಡುವಂತ ಮಾಯಾಜಾಲ ಸಾಮಾಜಿಕ ಜಾಲತಾಣ.

ಸಿಕ್ಕಸಿಕ್ಕವರ ಕೈಲಿ ಈ ಜಾಲ ಸಿಕ್ಕು ವಯಸ್ಸು ಸಾಧನೆ ಅವರ ಮೂಗಿನ ನೇರಕ್ಕೆ ಅವರು ಬದುಕಿದ ಪರಿಸರ ಭಾಷೆ ಬಳಸಿ ಅವಮಾನ ಮಾಡಿ ವಿಕೃತ ಆನಂದ ಅನುಭವಿಸುವುದು. ವಿಪರ್ಯಾಸ ದಿನಗಳು! ಇಂದಿನ ಸಾರ್ವಜನಿಕ ಜೀವನ public toilet ನಂತೆ ಆಗಿಬಿಟ್ಟಿದೆ. ಆದರು ವಿಧಿಯಿಲ್ಲಾ ಚರ್ಮ ದಪ್ಪಮಾಡಿ ಬದುಕಬೇಕು!. ಈಗ ವಿಷಯಕ್ಕೆ ಬರುವೆ ಈ ಅಕ್ಷರ ಠಂಕಿಸಿದ್ದಕ್ಕೆ. ಉದ್ಯಮದ ಕಲಾಬಂಧುಗಳಿಗೆ ನನ್ನ ಸಣ್ಣ ಅನುಭವದ ನುಡಿ!

ಮಾನ್ಯರೆ ನಶ್ವರ ಬಣ್ಣದ ಬದುಕು! ಕಲಾವಿಧನ ಜೀವನ ನಡೆಯುವವರೆಗೆ ನಾಣ್ಯ ಮಿಕ್ಕಂತೆ ಸವಕಲು! ಎಲ್ಲಿಯವರೆಗು ಕಲಾವಿದ ವರ್ಷಕ್ಕೆ ಮಾತ್ರ ಹೊರಬರುವ ಊರ ಮೆರೆದೇವರಂತೆ ಹೊರ ಬರಬೇಕು, ಆಗ ದೇವರಪರ ಅದ್ಭುತ ಅನನ್ಯ! ದಿನ ಆ ದೇವರು ಬೀದಿಗೆ ಬಂದರೆ ಮೌಲ್ಯ ಇರುವುದಿಲ್ಲಾ! ರಾಜನಾಗಲಿ ಸೇವಕನಾಗಲಿ ಜಗಳ ಗರ್ಷಣೆ ಸಹಜ! ಆ ಘರ್ಷಣೆ ನಿಭಾಯಿಸುವ ಕಲೆ ಕರಗತ ಆಗಿರಬೇಕು. ಆಗ ಕಾಡ್ಗಿಚ್ಚನ್ನು ತಣ್ಣಗೆ ಮಾಡಬಹುದು! ಹಾಗೆ ಅನ್ಯತ ಭಾವಿಸದೆ ನನ್ನ ಮಾತು ಆಲಿಸಬೇಕು ಕಲಾಬಂಧುಗಳು! ಆತ್ಮೀಯ ಮಾಧ್ಯಮಮಿತ್ರರು ಕಲಾರಂಗದ ನಮ್ಮ ಕಾಯಕ ಜನರಿಗೆ ತಲುಪಿಸೋ ನಾವಿಕರು, ನಾವು ನೀವು ದೇಹದ ಎರಡು ಕಣ್ಣಂತೆ ಯಾವುದಕ್ಕು ನೋವಾದರು ನಮಗೆ ನಷ್ಟ! ದಯಮಾಡಿ ವಿಶೇಷ ಹೃದಯ ನಿಮ್ಮದಾಗಿ ನಮ್ಮ ಚಿತ್ರರಂಗ ಬೀದಿ ಚರ್ಚೆಗೆ ವಿಷಯವಾಗದಿರಲಿ ವಿನಂತಿ! ಈಗಾಗಲೇ ಚಿತ್ರರಂಗ ಕೊರೊನಾ ಹೆಮ್ಮಾರಿ ಹೊಡೆತಕ್ಕೆ ನಲುಗಿದೆ! ಉದ್ಯಮ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದ ಮನಗಳ ಸರಿಮಾಡಿ ಎಂದು ಪ್ರಾರ್ಥನೆ.. ಸರ್ವೆಜನಃಸುಖಿನೋಭವ.

ಇದನ್ನೂ ಓದಿ: ‘ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಾಂಗುನೂ ಅಲ್ಲಾ’.. ದರ್ಶನ್ ಹೇಳಿಕೆಗೆ ಪ್ರೇಮ್ ಟಾಂಗ್

The post ದರ್ಶನ್-ಇಂದ್ರಜಿತ್ ಟಾಕ್ ವಾರ್​​ ಕುರಿತಂತೆ ನಟ ಜಗ್ಗೇಶ್​ ಕೊಟ್ಟ ಪ್ರತಿಕ್ರಿಯೆ ಏನು? appeared first on News First Kannada.

Source: newsfirstlive.com

Source link