ಕಲಬುರಗಿ: ಪ್ರತಿ ವರ್ಷ ಮಹಾರಾಷ್ಟ್ರದಲ್ಲಿ ಧಾರಕಾರ ಮಳೆಯಾದ್ರೆ ಕಲಬುರಗಿ ಜಿಲ್ಲೆಯ ಭೀಮಾ ನದಿಯಲ್ಲಿ ಪ್ರವಾಹ ಎದುರಾಗುತ್ತದೆ. ಈ ಸಂದರ್ಭದಲ್ಲಿ ಅಫಜಲಪುರದ ದುಧಣಗಿ ಗ್ರಾಮ ಇಡೀ ಜಲಾವೃತಗೊಂಡು ಜನ ಸಂಕಷ್ಟದಲ್ಲಿ ಜೀವನ ಕಳೆಯುತ್ತಿದ್ದರು. ಈ ಗ್ರಾಮದ ಜನರಿಗೆ ಸ್ಥಳಾಂತರಕ್ಕೆ ಗ್ರಾಮದ ಹೊರವಲಯದಲ್ಲಿ ಜಮೀನು ಗುರುತಿಸಿ 10 ವರ್ಷ ಕಳೆದಿದ್ದರೂ ಹಕ್ಕುಪತ್ರ ನೀಡಿರಲಿಲ್ಲ. ಈ ಕುರಿತು ಪಬ್ಲಿಕ್ ಟಿವಿಯ ನಿರಂತರ ವರದಿಯ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹ ಬಂದು ಉಂಟಾಗಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದರು. ಈ ಕುರಿತು ಪಬ್ಲಿಕ್ ಟಿವಿ ನೆರೆ ಪೀಡಿತ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿ, ಗ್ರಾಮದ 546 ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಕಲಬುರಗಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಇದನ್ನೂ ಓದಿ: ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯ

ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾಡಳಿತ ಇದೀಗ ನೆರೆ ಪೀಡಿತ ದುಧಣಗಿ ಗ್ರಾಮದ 546 ಕುಟುಂಬಗಳಿಗೆ ಹಕ್ಕು ಪತ್ರ ನೀಡಿದೆ. ಈ ಮೂಲಕ ಇನ್ನೇನು ಕೆಲ ದಿನಗಳಲ್ಲಿ ಪ್ರವಾಹ ಬರುತ್ತೆ ಅಂತಾ ಗ್ರಾಮದ ಜನ ಆತಂಕದಲ್ಲಿರುವಾಗಲೇ ಜಿಲ್ಲಾಡಳಿತ ಗ್ರಾಮದ ಪುನರ್‍ವಸತಿಗೆ ಬೇಕಾದ ಸಿದ್ಧತೆ ಮಾಡಿಕೊಂಡಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

The post ದಶಕದಿಂದ ಹಕ್ಕು ಪತ್ರಕ್ಕಾಗಿ ನೆರೆ ಪೀಡಿತರ ಹೋರಾಟ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾಡಳಿತ appeared first on Public TV.

Source: publictv.in

Source link