ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಡಿ.ಕೆ.ಶಿವಕುಮಾರ್​ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತರಾಟೆ | Does not want to ruin the personality of Mc Managuli says HD Kumaraswamy

ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಡಿ.ಕೆ.ಶಿವಕುಮಾರ್​ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ .ಕೆ. ಶಿವಕುಮಾರ್

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ. ಸಿ. ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು (ಅಕ್ಟೋಬರ್​ 9) ಸರಣಿ ಟ್ವೀಟ್ ಮಾಡಿರುವ ಅವರು, ಡಿ.ಕೆ. ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಕಟುವಾಗಿ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಟ್ವೀಟ್​ನ ಪೂರ್ಣ ವಿವರ ಇಲ್ಲಿದೆ
ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ಅನೈತಿಕ ಎಂಬುವುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಪ್ಪಟ ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದಿವಂಗತ ನಾಯಕ ಎಂಸಿ ಮನಗೂಳಿ ನಿಧನರಾಗುವುದಕ್ಕೆ 15 ದಿನ ಮೊದಲು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ. ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ, ಕೊವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:
ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ: ಎಚ್​ಡಿ ಕುಮಾರಸ್ವಾಮಿ ಅರೋಪ

‘ಕುಮಾರಸ್ವಾಮಿ ಕುರುಡು ಕಣ್ಣಿನಿಂದ RSS ನೋಡಿದ್ದಾರೆ’- ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ವಾಗ್ದಾಳಿ

TV9 Kannada

Leave a comment

Your email address will not be published. Required fields are marked *