ಕಲಬುರಗಿ: ಹೆತ್ತ ತಂದೆಯೇ ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ನಡೆದಿದೆ.
ನಾಲ್ಕು ವರ್ಷದ ಮಗು ಪೂನಮ್ ತಂದೆಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದು, ತಂದೆ ಅರ್ಜುನ (26) ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕುಡಿದ ಮತ್ತಿನಲ್ಲಿ ಅರ್ಜುನ ತನ್ನ ಮಗಳನ್ನೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮೃತ ಬಾಲಕಿಯ ತಾಯಿ ತವರಿನಲ್ಲಿದ್ದು, ಮಕ್ಕಳೊಂದಿಗೆ ಅರ್ಜುನ ಗ್ರಾಮದಲ್ಲಿ ವಾಸಿಸುತ್ತಿದ್ದನಂತೆ. ನಿನ್ನೆ ರಾತ್ರಿ ಮಗಳನ್ನು ಹೊಲಕ್ಕೆ ಕರೆದೊಯ್ದು ಕೊಲೆ ಮಾಡಿರುವ ಅರ್ಜುನ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕೌಟುಂಬಿಕ ಕಲಹದಿಂದ ಹೆಂಡತಿ ತವರು ಮನೆಯಿಂದ ಬಾರದೆ ಇದ್ದ ಕಾರಣದಿಂದಲೇ ಮಗಳನ್ನು ಕೊಂದು ಅರ್ಜುನ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.