ದೀಪಾವಳಿ ಪೂಜೆಯಲ್ಲಿ ಭಾಗಿಯಾಗಿ ಶ್ರೀರಾಮನ ಆಶೀರ್ವಾದ ಪಡೆದ ಸಿಎಂ ಕೇಜ್ರಿವಾಲ್​ ದಂಪತಿ


ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ದೆಹಲಿಯ ತ್ಯಾಗರಾಜ್​ ಮೈದಾನದಲ್ಲಿ ಆಯೋಜಿಸಿದ್ದ ದೀಪಾವಳಿ ಪೂಜಾ ಕಾರ್ಯಕ್ರಮದಲ್ಲಿ ಸಿಎಂ ಕೇಜ್ರಿವಾಲ್ ಹಾಗೂ ಅವರ ಪತ್ನಿ ಸುನೀತಾ ಕೇಜ್ರಿವಾಲ್​​ ಭಾಗಿಯಾಗಿದ್ದಾರೆ. ಜೊತೆಗೆ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಹಾಗೂ ಅವರ ಪತ್ನಿ ಸೀಮಾ ಸಿಸೋಡಿಯಾ ಸಹ ಪೂಜೆಯಲ್ಲಿ ಭಾಗಿಯಾಗಿ ಕೆಲ ಕಾಲ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದ್ದಾರೆ.

ದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಭವ್ಯ ರಾಮಮಂದಿರದ ಮಾದರಿಯನ್ನು 30 ಅಡಿ ಎತ್ತರ ಮತ್ತು 80 ಅಡಿ ಅಗಲದ ನಿರ್ಮಿಸಿಲಾಗಿತ್ತು. ದಿಲ್ಲಿ ಕಿ ದೀಪಾವಳಿ ಹೆಸರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿ ಸರ್ಕಾರದ ಬಹುತೇಕ ಸಚಿವರು, ಎಎಪಿ ಪಕ್ಷದ ನಾಯಕರು ಭಾಗಿಯಾಗಿದ್ದರು.

News First Live Kannada


Leave a Reply

Your email address will not be published. Required fields are marked *