– ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲ ಪತ್ತೆ ಮಾಡಿದ್ದಾರೆ.

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 35 ವರ್ಷದ ಮಹಿಳೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೂಟ್ ಕೇಸ್ ತಳ ಭಾಗದಲ್ಲಿ ಮರೆಮಾಚಿ 8 ಕೆ.ಜಿ. ತೂಕದ 56 ಕೋಟಿ ರೂ. ಮೌಲ್ಯದ ಹೆರಾಯಿನ್ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಈ ಕುರಿತು ತನಿಖೆ ನಡೆಸಿ, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

The post ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ appeared first on Public TV.

Source: publictv.in

Source link