ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇರಲಾಗಿದ್ದ ಲಾಕ್​ಡೌನ್ ಹಾಗೂ ಉತ್ತರಪ್ರದೇಶದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಮತ್ತೊಂದು ವಾರ ಮುಂದುವರಿಕೆಯಾಗಲಿದೆ.

ದೆಹಲಿಯಲ್ಲಿ ಮೆಟ್ರೋ ಬಂದ್​
ನಾಳೆಯಿಂದ ದೆಹಲಿಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಲಾಕ್​​​ಡೌನ್ ಇರಲಿದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಮೇ 17ರ ಬೆಳಗ್ಗೆ 5 ಗಂಟೆವರೆಗೆ ಲಾಕ್​ಡೌನ್ ಇರಲಿದೆ. ಹಾಗೇ ಈ ಬಾರಿ ದೆಹಲಿಯಲ್ಲಿ ಮೆಟ್ರೋ ಬಂದ್ ಆಗಲಿದೆ ಎಂದು ಘೋಷಿಸಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿದಿದ್ದರೂ ಕೂಡ ನಾವು ಮೈಮರೆಯಬಾರದು ಅನ್ನೋ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಕೊರೊನಾ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿದೆ, ಆದರೆ ಇನ್ನೂ ನಾವು ಸಡಿಲಿಕೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಉತ್ತರಪ್ರದೇಶದಲ್ಲಿ ಇಂದು ಒಂದೇ ದಿನ 26 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ, ಮೇ 17ರವರೆಗೆ ಕರ್ಫ್ಯೂ ವಿಸ್ತರಣೆ ಮಾಡಿ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ನಂತರ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ.

The post ದೆಹಲಿಯಲ್ಲಿ ಮತ್ತೊಂದು ವಾರ ಲಾಕ್​ಡೌನ್​ ವಿಸ್ತರಣೆ, ಮೆಟ್ರೋ ಬಂದ್​ appeared first on News First Kannada.

Source: newsfirstlive.com

Source link