ದೆಹಲಿ ಮಾಲಿನ್ಯದ ಚಿತ್ರಣ
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ ಎಂದು ಸರ್ಕಾರ ಪ್ರತಿಪಾದಿಸುತ್ತಿದೆ. ಆದರೆ ಇಲ್ಲಿ ಸ್ವಲ್ಪವೂ ಮಾಲಿನ್ಯ ಕಡಿಮೆಯಾಗಿಲ್ಲ. ಬದಲಾಗಿ ಹೆಚ್ಚಾಗಿದೆ ಎಂದು ಇಂದು ಸುಪ್ರೀಂಕೋರ್ಟ್ ಹೇಳಿದೆ. ಅಷ್ಟೇ ಅಲ್ಲ, ಕೈಗಾರಿಕಾ ಮತ್ತು ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯದ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಮತ್ತು ದೆಹಲಿ ಆಪ್ ಸರ್ಕಾರಕ್ಕೆ 24 ಗಂಟೆಗಳ ಡೆಡ್ಲೈನ್ನ್ನೂ ನೀಡಿದೆ.