ದೆಹಲಿಯ ಕಾರ್ಯಕಾರಣಿ ಸಭೆಗೂ ಮುನ್ನ ಸಿಎಂ ಬೊಮ್ಮಾಯಿ ಜೊತೆ RSS ರಹಸ್ಯ ಮಾತುಕತೆ


ನವದೆಹಲಿ: ಬಿಜೆಪಿ ಕಾರ್ಯಕಾರಿಣಿಗೂ ಮೊದಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಆರ್‌ಎಸ್‌ಎಸ್ ಸಭೆ ನಡೆಸಿದೆ ಅನ್ನೋ ಮಾಹಿತಿ ಸಿಕ್ಕಿದೆ.

ಆರ್​ಎಸ್​ಎಸ್​ ಹಿರಿಯ ಮುಖಂಡ ಪ್ರಮುಖ್ ಮುಕುಂದ್ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದ್ದಾರೆ. ರೇಸ್ ಕೋರ್ಸ್ ಸರ್ಕಾರಿ ನಿವಾಸದಲ್ಲಿ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಭೇಟಿ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಮುಕುಂದ್‌ ಜಿ ಜೊತೆ ಚರ್ಚೆ ನಡೆಸಿದ ಬಳಿಕ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಗಿಯಾದರು. ಈ ಹಿಂದೆ ಯಡಿಯೂರಪ್ಪ ನಾಯಕತ್ವ ಬದಲಾವಣೆ ವೇಳೆ ಪ್ರಮುಖ್ ಮುಕುಂದ್ ಪ್ರಮುಖ ಪಾತ್ರವಹಿಸಿದ್ದರು.

ಪಕ್ಷ ಸಂಘಟನೆ, ಮುಂಬರುವ ಚುನಾವಣೆಯ ದೃಷ್ಟಿ ಇಟ್ಟುಕೊಂಡು ದೆಹಲಿ ನಾಯಕರ ನೇತೃತ್ವದಲ್ಲಿ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗಿಯಾಗಿದ್ದಾರೆ.

The post ದೆಹಲಿಯ ಕಾರ್ಯಕಾರಣಿ ಸಭೆಗೂ ಮುನ್ನ ಸಿಎಂ ಬೊಮ್ಮಾಯಿ ಜೊತೆ RSS ರಹಸ್ಯ ಮಾತುಕತೆ appeared first on News First Kannada.

News First Live Kannada


Leave a Reply

Your email address will not be published. Required fields are marked *