ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್‌ನ ಅಟ್ಟಹಾಸ ಕಡಿಮೆಯಾಗದ ಹಿನ್ನೆಲೆ ಇಂದು ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಘಂಟೆಗೆ ವಿಡಿಯೋ ಸಂವಾದ ನಡೆಸಲಿರುವ ನರೇಂದ್ರ ಮೋದಿ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ತಮ್ಮ ಗೃಹ ಕಚೇರಿ ಕೃಷ್ಣಾದಿಂದ ಸಭೆಯಲ್ಲಿ ಭಾಗಿಯಾಗಲಿದ್ದು, ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್-19 ಸೋಂಕಿನ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಸಿಎಂಗೆ ಹೈಕಮಾಂಡ್ ದಿಢೀರ್ ಬುಲಾವ್; ರಾಜ್ಯ ರಾಜಕಾರಣದಲ್ಲಿ ಆಗಲಿದ್ಯಾ ಮಹತ್ವದ ಬದಲಾವಣೆ?

The post ದೆಹಲಿ ಪ್ರವಾಸಕ್ಕೂ ಮುನ್ನ ಸಿಎಂ ಬಿಎಸ್​ವೈ ಜೊತೆ ಪ್ರಧಾನಿ ಮೋದಿ ಸಭೆ appeared first on News First Kannada.

Source: newsfirstlive.com

Source link