ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ – The tirtha offered in temples should not be drunk, they are unscientific: Former minister Bt Lalitha Nayak


ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು, ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

ಗದಗ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು (tirtha) ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು (unscientific), ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ (Bt Lalitha Nayak) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ಮನೆಯಲ್ಲಿ ನೀರು ಇಲ್ವಾ? ಕೃಷ್ಣಯ್ಯ ಶೆಟ್ಟಿ ಗಂಗಾಜಲ ತಂದು ಕೊಟ್ಟರು, ಅಲ್ಲಿ ಹೆಣ ತೇಲುತ್ತೆ. ಅಲ್ಲಿ ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಮಂಗಳ ಮುಖಿಯರು ದೇವರು ಅಂತೆ? ಅದು ತಪ್ಪು. ಯಾರಾದರೂ ಒಂಟಿಯಾಗಿ ಸಿಕ್ಕರೆ ಎತ್ತಿಹಾಕಿಕೊಂಡು ಹೋಗಿ ಕೊಂದು ಬಿಡುತ್ತಾರೆ. ಅಷ್ಟೊಂದು ಹಿಂಸೆಯನ್ನು ನೀಡುತ್ತಾರೆ. ಸಾಕಷ್ಟು ಉದಾಹರಣೆ ಇವೆ. ಗಂಡಸರು ಕೂಡಾ ಆ ವೇಷವನ್ನು ಹಾಕಿಕೊಂಡು ಮಂಗಳಮುಖಿ ಅಂತಾರೆ. ಅವರನ್ನು ದುಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಲಲಿತಾ ನಾಯಕ್ ಹೇಳಿದರು.

ದೈವ ನರ್ತಕರ ಮಾಸಾಶನಕ್ಕೆ ಬಿ.ಟಿ.ಲಲಿತಾ ನಾಯಕ್ ವಿರೋಧ

ರಾಜ್ಯ ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡಬಾರದು. ಯಾರೋ ನೋವಿನಿಂದ ಕೂಗಿದವರನ್ನು ದೇವರು ಎಂದರು. ಈಗಿರುವ ಎಲ್ಲಾ ದೇವರು ಮನುಷ್ಯರೇ. ಇದೊಂದು ಸುಳ್ಳು ಸತ್ಯವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು. 2 ಸಾವಿರ ರೂ. ಮಾಸಾಶನ ನೀಡುವ ಬದಲು ಉದ್ಯೋಗ ನೀಡಿ. ಮಾನವ ಶ್ರಮವನ್ನು ಸರ್ಕಾರ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ದೇವರು ನಾನು ಅಂತಾ ಕುಣಿದಾಗ, ಅದಕ್ಕೆ ಎರಡು ಸಾವಿರ ಕೊಟ್ಟರೆ ಅದು ಸಾಲಲ್ಲ ಮುಂದೆ ಆತ ಮೌಡ್ಯವನ್ನು ಬಿತ್ತುತ್ತಾನೆ. ಸಾರ್ವಜನಿಕ ಹಣವನ್ನು ಪೋಲು ಮಾಡಬಾರದು. ಅರ್ಚಕರು ಹಾಗೂ ಮೌಲ್ವಿಗಳಿಗೂ ಮಾಸಾಶನ ನೀಡಬಾರದು. ದೇವಸ್ಥಾನದಲ್ಲಿ ನಮಗೆ ಜ್ಞಾನ ಸಿಗಲ್ಲ. ಗ್ರಂಥಾಲಯ, ಶಾಲೆಗಳಲ್ಲಿ ಮಾತ್ರ ನಮಗೆ ಜ್ಞಾನ ಸಿಗುವುದು ಎಂದು ಹೇಳಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.