ದೇವೇಂದ್ರ ಫಡ್ನವಿಸ್​ ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ; ನವಾಬ್ ಮಲಿಕ್ ಎಚ್ಚರಿಕೆ | Maharashtra Minister Nawab Malik threatens to file defamation case if Devendra Fadnavis does not apologise


ದೇವೇಂದ್ರ ಫಡ್ನವಿಸ್​ ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ; ನವಾಬ್ ಮಲಿಕ್ ಎಚ್ಚರಿಕೆ

ನವಾಬ್​ ಮಲ್ಲಿಕ್​​

ಮುಂಬೈ: ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್​ಗೆ ಭೂಗತಲೋಕದ ನಂಟಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವಿಸ್​ ವಿರುದ್ಧವೂ ಗಂಭೀರ ಆರೋಪ ಮಾಡಿದ್ದ ನವಾಬ್ ಮಲಿಕ್, ದೇವೇಂದ್ರ ಫಡ್ನವಿಸ್​ ಅವರಿಗೆ ದಾವೂದ್ ಇಬ್ರಾಹಿಂನ ಸಹಾಯಕ ರಿಯಾಜ್ ಭಾಟಿಯೊಂದಿಗೆ ಸಂಬಂಧವಿತ್ತು ಎಂದಿದ್ದರು. 2-3 ದಿನಗಳಿಂದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ತೀವ್ರ ಮಾತಿನ ಸಮರಕ್ಕೆ ಸಿಲುಕಿರುವ ಮಹಾರಾಷ್ಟ್ರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ನವಾಬ್ ಮಲಿಕ್ ಇದೀಗ ನವಾಬ್ ಮಲಿಕ್ ಮನೆಯಲ್ಲಿ ಡ್ರಗ್ಸ್​ ಪತ್ತೆಯಾಗಿದೆ ಎಂಬ ದೇವೇಂದ್ರ ಫಡ್ನವಿಸ್​ ಹೇಳಿಕೆಗೆ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ.

ದೇವೇಂದ್ರ ಫಡ್ನವಿಸ್ 2 ದಿನಗಳ ಹಿಂದೆ ತಮ್ಮ ಮಾಧ್ಯಮ ಸಂವಾದದಲ್ಲಿ ಮಲಿಕ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಾರ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿದೆಯೋ ಆ ಪಕ್ಷದ ಸ್ಥಿತಿಯನ್ನು ನೀವು ಊಹಿಸಬಹುದು ಎಂದಿದ್ದರು. ಇದರ ಬೆನ್ನಲ್ಲೇ, ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರು ಫಡ್ನವಿಸ್ ಅವರ ಹೇಳಿಕೆಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಸಮೀರ್ ಖಾನ್ ಮಾದಕ ದ್ರವ್ಯ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ನಮ್ಮ ಮನೆಯಲ್ಲಿ ಯಾವುದೇ ಡ್ರಗ್ಸ್​ ಪತ್ತೆಯಾಗಿಲ್ಲ. ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​ ಅವರಿಂದ 5 ಕೋಟಿ ರೂ. ಹಾನಿಯಾಗಿದೆ ಎಂದು ಸಮೀರ್ ಖಾನ್ ಅವರು ತಮ್ಮ ವಕೀಲರ ಮೂಲಕ ಹೇಳಿದ್ದಾರೆ.

ನವಾಬ್ ಮಲಿಕ್ ಮತ್ತು ದೇವೇಂದ್ರ ಫಡ್ನವೀಸ್ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ. ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಸಂದರ್ಭದಲ್ಲಿ ಮಲಿಕ್ ಫಡ್ನವಿಸ್ ವಿರುದ್ಧ ಆರೋಪಗಳನ್ನು ಮಾಡಲು ಪ್ರಾರಂಭಿಸಿದರು. ಅದಕ್ಕೆ ದೇವೇಂದ್ರ ಫಡ್ನವೀಸ್ ನವಾಬ್ ಮಲಿಕ್ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದರು.

ನವೆಂಬರ್ 1 ರಂದು ಮಲಿಕ್ ಅವರು ಫಡ್ನವಿಸ್ ಮಾದಕವಸ್ತು ವ್ಯಾಪಾರಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಅವರೊಂದಿಗೆ ಜೈದೀಪ್ ರಾಣಾ ಅವರಿರುವ ಫೋಟೋವನ್ನು ಅವರು ಬಿಡುಗಡೆ ಮಾಡಿದ್ದರು. ನವೆಂಬರ್ 9ರಂದು ಅದಕ್ಕೆ ಪ್ರತಿಯಾಗಿ, ನವಾಬ್ ಮಲಿಕ್ ಭೂಗತ ಜಗತ್ತಿನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಫಡ್ನವಿಸ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಮಲಿಕ್, ದೇವೇಂದ್ರ ಫಡ್ನವೀಸ್ ಅವರು ಶಂಕಿತ ದಾವೂದ್ ಸಹಾಯಕ ರಿಯಾಜ್ ಭಾಟಿಯನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನು ಅಲ್ಲಗಳೆದ ಫಡ್ನವಿಸ್, ‘ಹಂದಿಯೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ, ಅದರಿಂದ ನೀವೇ ಕೊಳಕಾಗುತ್ತೀರಿ’ ಎಂದಿದ್ದರು.

ಇದನ್ನೂ ಓದಿ: ಸಮೀರ್ ವಾಂಖೆಡೆಯ ಅಪ್ಪ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ನವಾಬ್ ಮಲಿಕ್ ಪ್ರತಿಕ್ರಿಯೆ ಕೋರಿದ ಬಾಂಬೆ ಹೈಕೋರ್ಟ್

ನೋಟು ಅಮಾನ್ಯೀಕರಣ ಬಳಿಕ ಮಾಜಿ ಸಿಎಂ ಮಾಡಿದ್ದೇನು?: ದೇವೇಂದ್ರ ಫಡ್ನವೀಸ್​ ವಿರುದ್ಧ ಗಂಭೀರ ಆರೋಪ ಮಾಡಿದ ನವಾಬ್​ ಮಲ್ಲಿಕ್

TV9 Kannada


Leave a Reply

Your email address will not be published. Required fields are marked *