ದೇಶಕ್ಕೆ 1947ರಲ್ಲಿ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ ಸಿಕ್ಕಿದ್ದು ನಿಜವಾದ ಸ್ವಾತಂತ್ರ್ಯ -ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್


ಬಾಲಿವುಡ್​ ಖ್ಯಾತ ನಟಿ ಮತ್ತು ಪದ್ಮಶ್ರೀ ಪುರಸ್ಕೃತೆ ಕಂಗನಾ ರಣೌತ್​ ಮತ್ತೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಸದಾ ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಲ್ಲಿರುವ ನಟಿ ಇದೀಗ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚಿಗೆ ಖಾಸಗಿ ಸುದ್ದಿ ಮಾಧ್ಯಮ ನಡೆಸಿದ ಸಂದರ್ಶನದಲ್ಲಿ ‘1947ರಲ್ಲಿ  ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು’ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಪರೋಕ್ಷವಾಗಿ ಹಾಡಿ ಹೊಗಳಿದ್ದಾರೆ. ಸದ್ಯ  ಕಂಗನಾರ ಹೇಳಿಕೆ ತೀವ್ರ ವಿವಾದ ಹುಟ್ಟು ಹಾಕಿದೆ. ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳು ಸೇರಿದಂತೆ ಕಂಗನಾ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಗಳು ಕೇಳಿ ಬರುತ್ತಿವೆ.

ಸ್ವಾತಂತ್ರ್ಯ ಚಳವಳಿಯ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಕಂಗನಾ ಮೇಲೆ ದೇಶದ್ರೋಹದ ಕೇಸ್​ ದಾಖಲಿಸುವಂತೆ ಆಮ್​ ಆದ್ಮಿ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷೆ ಪ್ರೀತಿ ಮೆನನ್​ ಕೇಸ್​ ದಾಖಲಿಸುವಂತೆ ಮುಂಬೈ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇನ್ನು ಬಿಜೆಪಿ ಸಂಸದ ವರುಣ್​ ಗಾಂಧಿ ಕೂಡ ಟ್ವೀಟ್​ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದು ‘ದೇಶದ ಸ್ವಾತಂತ್ರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಲಿದಾನಗಳನ್ನು ತಿರಸ್ಕರಿಸಿದ ಕಂಗನಾರ ಮಾತುಗಳನ್ನು ಅವರ ಹುಚ್ಚು ನಿರ್ಧಾರದ ಮಾತುಗಳು ಅನ್ನಬೇಕೋ, ಅಥವಾ ದೇಶದ್ರೋಹ ಅನ್ನಬೇಕೋ ಎಂದು ಕಿಡಿಕಾರಿದ್ದಾರೆ.

ವರುಣ್​ ಗಾಂಧಿ ಅವರ ಇನ್ಸ್ಟಾ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಕಂಗನಾ ‘ನಾನು 1857ರ ಪ್ರಥಮ ಸ್ವಾತಂತ್ರ ಹೋರಾಟದ ಬಗ್ಗೆ ಮಾತನಾಡಿದ್ದು, ಆ ಬಳಿಕ ಬ್ರಿಟಿಷರ ದೌರ್ಜನ್ಯ ಮತ್ತು ಕ್ರೂರತನ ಹೆಚ್ಚಾಯಿತು. ಸುಮಾರು ಒಂದು ಶತಮಾನದ ಬಳಿಕ ಗಾಂಧಿಜಿಯವರ ಭಿಕ್ಷಾಪಾತ್ರಗೆ ಸ್ವಾತಂತ್ರ್ಯ ದಕ್ಕಿತು ಎಂದಿದ್ದೆನಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.

News First Live Kannada


Leave a Reply

Your email address will not be published. Required fields are marked *