ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 39,796 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,05,85,229ಕ್ಕೆ ತಲುಪಿದೆ.

ಇಂದು 42,352 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,97,00,430ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 723 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 4,02,728 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,05,85,229
ಒಟ್ಟು ಡಿಸ್ಚಾರ್ಜ್ ಆದವರು: 2,97,00,430
ಒಟ್ಟು ಸಾವುಗಳು: 4,02,728
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 4,82,071
ಈವರಗೆ ವ್ಯಾಕ್ಸಿನ್ ಪಡೆದವರು: 35,28,92,046

 

The post ದೇಶದಲ್ಲಿಂದು 39,796 ಜನರಿಗೆ ಕೊರೊನಾ.. 42,352 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link