ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 42,640 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 91 ದಿನಗಳ ಬಳಿಕ ಒಂದೇ ದಿನ ದಾಖಲಾದ ಅತ್ಯಂತ ಕಡಿಮೆ ಕೇಸ್​​ಗಳ ಸಂಖ್ಯೆ ಇದಾಗಿದೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,99,77,861ಕ್ಕೆ ತಲುಪಿದೆ.

ಇಂದು 81,839 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,89,26,038ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,167 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,89,302 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 2,99,77,861
ಒಟ್ಟು ಡಿಸ್ಚಾರ್ಜ್ ಆದವರು: 2,89,26,038
ಒಟ್ಟು ಸಾವುಗಳು: 3,89,302
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 6,62,521
ಈವರಗೆ ವ್ಯಾಕ್ಸಿನ್ ಪಡೆದವರು: 28,87,66,201

The post ದೇಶದಲ್ಲಿಂದು 42,640 ಜನರಿಗೆ ಕೊರೊನಾ ..91 ದಿನಗಳ ಬಳಿಕ ಅತೀ ಕಡಿಮೆ ಕೇಸ್ appeared first on News First Kannada.

Source: newsfirstlive.com

Source link