ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 43,071 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,05,45,433ಕ್ಕೆ ತಲುಪಿದೆ.

ಇಂದು 52,299 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,96,58,078ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 955 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 4,02,005 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,05,45,433
ಒಟ್ಟು ಡಿಸ್ಚಾರ್ಜ್ ಆದವರು: 2,96,58,078
ಒಟ್ಟು ಸಾವುಗಳು: 4,02,005
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 4,85,350
ಈವರಗೆ ವ್ಯಾಕ್ಸಿನ್ ಪಡೆದವರು: 35,12,21,306

 

The post ದೇಶದಲ್ಲಿಂದು 43,071 ಜನರಿಗೆ ಕೊರೊನಾ.. 52,299 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link