ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 4,14,188 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 3,915 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸದ್ಯ 36,45,164 ಸಕ್ರಿಯ ಪ್ರಕರಣಗಳಿವೆ.

3,31,507 ಮಂದಿ ನಿನ್ನೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟಾರೆ ವರದಿಯಾದ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ. ಹಾಗೇ ಇಲ್ಲಿವರೆಗೆ 1,76,12,351 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,34,083 ಮಂದಿ ಈವರೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ದೇಶದಾದ್ಯಂತ ಈವರೆಗೆ ಒಟ್ಟು 16,49,73,058 ಜನರಿಗೆ ಲಸಿಕೆ ನೀಡಲಾಗಿದೆ.

ಕೊರೊನಾ ಪ್ರಕರಣಗಳ ಅಂಕಿ-ಅಂಶ

  • ಒಟ್ಟು ಪ್ರಕರಣಗಳು: 2,14,91,598
  • ಒಟ್ಟು ಗುಣಮುಖರಾದವರು: 1,76,12,351
  • ಈವರೆಗೆ ಸಾವನ್ನಪ್ಪಿದವರ ಸಂಖ್ಯೆ: 2,34,083
  • ಈವರೆಗಿನ ವ್ಯಾಕ್ಸಿನೇಷನ್: 16,49,73,058

The post ದೇಶದಲ್ಲಿ ಇಂದು 4.14 ಲಕ್ಷ ಮಂದಿಗೆ ಕೊರೊನಾ.. 3,915 ಸೋಂಕಿತರು ಸಾವು appeared first on News First Kannada.

Source: newsfirstlive.com

Source link