ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ನರ್ತನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ.

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2,76,070 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 3,874 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ 2,87,122 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ 31,29,878 ಸಕ್ರಿಯ ಪ್ರಕರಣಗಳಿವೆ. 2,23,55,440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18,70,09,792 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.

ದೇಶದಲ್ಲಿ ನಿನ್ನೆ ಒಂದೇ ದಿನ 20,55,010 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 32,23,56,187 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

https://twitter.com/ANI/status/1395228288151212032/photo/1

The post ದೇಶದಲ್ಲಿ ಒಂದೇ ದಿನ 3,69,077 ಮಂದಿ ಡಿಸ್ಚಾರ್ಜ್- 3,874 ಮಂದಿ ಕೊರೊನಾಗೆ ಬಲಿ appeared first on Public TV.

Source: publictv.in

Source link