ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ರೌದ್ರನರ್ತನ ತೋರುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 4,01,993 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 3,523 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ 2,11,853 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ 32,68,710 ಸಕ್ರಿಯ ಪ್ರಕರಣಗಳಿವೆ. 1,56,84,406 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 15,49,89,635 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.

ದೇಶದಲ್ಲಿ ನಿನ್ನೆ ಒಂದೇ ದಿನ 19,45,29 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 28,83,37,385 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

The post ದೇಶದಲ್ಲಿ ಒಂದೇ ದಿನ 4,01,993 ಹೊಸ ಪ್ರಕರಣ- ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆ appeared first on Public TV.

Source: publictv.in

Source link