ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ1,00,636 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,89,09,975 ಕ್ಕೆ ಏರಿಕೆಯಾಗಿದೆ.

ಇಂದು 1,74,399 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,71,59,180ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,427 ಮಂದಿ ಸಾವನ್ನಪ್ಪಿದ್ದು ಈವರೆಗೆ 3,49,186 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು

ಒಟ್ಟು ಸೋಂಕಿತರು: 2,89,09,975
ಒಟ್ಟು ಡಿಸ್ಚಾರ್ಜ್ ಆದವರು: 2,71,59,180
ಒಟ್ಟು ಸಾವುಗಳು: 3,49,186
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 14,01,609
ಈವರಗೆ ವ್ಯಾಕ್ಸಿನ್ ಪಡೆದವರು: 23,27,86,482

The post ದೇಶದಲ್ಲಿ ಕೊರೊನಾ ಇಳಿಕೆ.. ಇಂದು 1,00,636 ಪಾಸಿಟಿವ್ ಕೇಸ್.. 1,74,399 ಮಂದಿ ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link