ದೇಶದ ಮೊದಲ ಕೊರೊನಾ ಸೋಂಕಿತನಿಗೆ ಮತ್ತೆ ತಗುಲಿದ ಸೋಂಕು

– ಎರಡನೇ ಬಾರಿ ಕೋವಿಡ್ ಪಾಸಿಟಿವ್

ತಿರುವನಂತಪುರ: ದೇಶದ ಮೊದಲ ಕೊರೊನಾ ಸೋಂಕಿತನಿಗೆ ಎರಡನೇ ಬಾರಿ ಸೋಂಕು ತಗುಲಿದ್ದು, ಕ್ವಾರಂಟೈನ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೇರಳದ ವೈದ್ಯಕೀಯ ವಿದ್ಯಾರ್ಥಿ ಮೊದಲ ಕೊರೊನಾ ಸೋಂಕಿತ. ಈ ವಿದ್ಯಾರ್ಥಿ ಚೀನಾದ ವುಹಾನ್ ನಿಂದ ಹಿಂದಿರುಗಿದ್ದ ವೇಳೆ ಪರೀಕ್ಷಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ತ್ರಿಶೂರ್ ಮೂಲದ ವಿದ್ಯಾರ್ಥಿಯಲ್ಲಿ ಜನವರಿ 30, 2020ರಂದು ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ ಈ ವಿದ್ಯಾರ್ಥಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಸದ್ಯ ವಿದ್ಯಾರ್ಥಿಯಲ್ಲಿ ಯಾವುದೇ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಹಾಗಾಗಿ ವಿದ್ಯಾರ್ಥಿಯನ್ನು ಕ್ವಾರಂಟೈನ್ ನಲ್ಲಿರಿಸಲಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಆದ್ರೆ ವಿದ್ಯಾರ್ಥಿ ಕೊರೊನಾ ಲಸಿಕೆ ಪಡೆದುಕೊಂಡಿಲ್ಲ ಎಂದು ಡಾ.ಕೆ.ಜೆ.ರೀನಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಕೇರಳ ಮೂಲದ ವಿದ್ಯಾರ್ಥಿ ವುಹಾನ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುತ್ತಿದ್ದರು. ರಜೆ ಹಿನ್ನೆಲೆ ಕೇರಳಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜನವರಿ 30ರಂದು ವರದಿ ಪಾಸಿಟಿವ್ ಬಂದಿತ್ತು. ತ್ರಿಶೂರ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಫೆಬ್ರವರಿ 20, 2020ರಂದು ವಿದ್ಯಾರ್ಥಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದನ್ನೂ ಓದಿ: ಜನ ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡಿಕೊಳ್ಳದಿರುವುದು ಆತಂಕಕ್ಕೆ ಕಾರಣ: ಮೋದಿ

ಈ ಮೊದಲು ಅನೇಕರು ಎರಡೆರಡು ಬಾರಿ ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಆದ್ರೆ ಇದು ದೇಶದ ಮೊದಲ ಪ್ರಕರಣ ಇದಾಗಿತ್ತು. ಸದ್ಯ ದೇಶದ ಜನರು ಕೊರೊನಾ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಪಡೆದುಕೊಂಡ ನಂತರವೂ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ. ಇದನ್ನೂ ಓದಿ: ಪಾಕಿಸ್ತಾನ ತಂಡದಲ್ಲಿ ಕೊಹ್ಲಿ- ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

The post ದೇಶದ ಮೊದಲ ಕೊರೊನಾ ಸೋಂಕಿತನಿಗೆ ಮತ್ತೆ ತಗುಲಿದ ಸೋಂಕು appeared first on Public TV.

Source: publictv.in

Source link