ಬೆಂಗಳೂರು: ಬಹು ನಿರೀಕ್ಷಿತ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಈಗ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ವೆಬ್​ಸೈಟ್ www.karresults.nic.in ​ ನಲ್ಲಿ ನೋಡಬಹುದಾಗಿದೆ.

ಈ ಬಾರಿ ಎಲ್ಲಾ ಪಿಯುಸಿ ವಿದ್ಯಾರ್ಥಿಗಳನ್ನು ಕೊರೊನಾ ಕಾರಣಕ್ಕಾಗಿ ಪಾಸ್​ ಮಾಡಲಾಗಿದೆ. ವಿದ್ಯಾರ್ಥಿಗಳು ಈಗ ರಿಸಲ್ಟ್ ನೋಡಬಹುದಾಗಿದೆ ಎಂದರು ಸುರೇಶ್​ ಕುಮಾರ್​​. ಸಂಜೆ 5 ರ ನಂತರ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎನ್ನಲಾಗಿದೆ. ಎಸ್​ಎಸ್​ಎಲ್ ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನ ಪರಿಗಣನೆಗೆ ತೆಗೆದುಕೊಂಡು ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಇದೇ ವೇಳೆ ಮಾಹಿತಿ ನೀಡಿದ್ದಾರೆ.

The post ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಎಲ್ಲ ವಿದ್ಯಾರ್ಥಿಗಳೂ ಪಾಸ್ appeared first on News First Kannada.

Source: newsfirstlive.com

Source link