ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಇಲಾಖೆ ತಿಳಿಸಿದೆ..

ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಹೇಳಿದೆ.

The post ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿ ಶಿಕ್ಷಣ ಇಲಾಖೆ ಆದೇಶ appeared first on News First Kannada.

Source: News First Kannada
Read More