ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಿಸುವ ಸಲುವಾಗಿ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಲು ನಿರ್ಧರಿಸಲಾಗಿದೆ.

2020-21ರ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಘೋಷಿಸಲು ವಿದ್ಯಾರ್ಥಿಗಳು ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮಾರ್ಗದರ್ಶಿ ಸೂತ್ರ ತಯಾರಿಸಲು ಸೂಚಿಸಲಾಗಿದೆ. ಈಗ ಇದರ ಜೊತೆಗೆ ಎಸ್​​ಎಸ್​ಎಲ್​ಸಿಯಲ್ಲಿ ಗಳಿಸಿದ ಅಂಕವನ್ನೂ ಅವಲೋಕಿಸಿ ಸೂಕ್ತ ಪರಿಹಾರ ಸೂತ್ರ ಪ್ರಸ್ತಾಪಿಸಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕರ್ನಾಟಕ‌ ಪ್ರೌಢ ಶಿಕ್ಷಣ‌ ಪರೀಕ್ಷಾ ಮಂಡಳಿಯ ವತಿಯಿಂದ‌ ಅಂಕಿ ಅಂಶಗಳನ್ನು ಪಡೆದು, ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

The post ದ್ವಿತೀಯ ಪಿಯು ಫಲಿತಾಂಶ ಘೋಷಣೆಗೆ SSLC ಮಾರ್ಕ್ಸ್​​ ಕೂಡ ಪರಿಗಣಿಸಲು ಸೂಚನೆ appeared first on News First Kannada.

Source: newsfirstlive.com

Source link