ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಬೋಲ್ಯಾಂಡ್ ಅಂಗಳದಲ್ಲಿ ಮೊದಲ ಪಂದ್ಯಕ್ಕೆ ಅಖಾಡ ಸಿದ್ಧವಾಗಿದ್ದು, ಎಲ್ಲಾ ಮಾದರಿಯ ನಾಯಕತ್ವಕ್ಕೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ 7 ವರ್ಷಗಳ ಬಳಿಕ ಬ್ಯಾಟ್ಸ್ಮನ್ ಆಗಿ ಅಖಾಡಕ್ಕೆ ಇಳಿಯಲಿದ್ದಾರೆ.
ಟೆಸ್ಟ್ ಸರಣಿ ಪಂದ್ಯಗಳಲ್ಲಿ ಕೈಚಲ್ಲಿದ ಟೀಂ ಇಂಡಿಯಾ ಇದಕ್ಕೆ ತಿರುಗೇಟು ನೀಡುವ ತವಕದಲ್ಲಿದೆ. 4 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಆಫ್ರಿಕಾದ ನೆಲದಲ್ಲಿ ಭಾರತ ದ್ವಿಪಕ್ಷೀಯ ಸರಣಿ ಆಡುತ್ತಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ತಂಡವನ್ನು ಮುನ್ನೆಡೆಸಲಿದ್ದಾರೆ.