ದ. ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಕೇಸ್; ಕಾರ್ ಅಡ್ಡಗಟ್ಟಿದ ಇಬ್ಬರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನ ಘಟನೆ ಮಾಸುವ ಮುನ್ನವೇ ಮಂಗಳೂರಲ್ಲಿ ನೈತಿಕ ಪೊಲೀಸ್​ಗಿರಿ -ಐವರ ಅರೆಸ್ಟ್

ದಂಪತಿಯೊಂದಿಗೆ ಅನ್ಯಕೋಮಿನ ಯುವತಿಯರು ತೆರಳುತಿದ್ದ ಕಾರನ್ನು ದಾರಿ ಮಧ್ಯೆ ಅಡ್ಡ ಹಾಕಿದ ಯುವಕರ ತಂಡ ಕಾರಿನಲ್ಲಿದ್ದ ಅನ್ಯಕೋಮಿನ ಯುವತಿಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದಿದೆ. ಘಟನೆಗೆ ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿರುವ ಮೂಡಬಿದಿರೆ ಪೊಲೀಸರು ಇತರ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿವೆ ಎನ್ನಲಾಗಿದೆ.

News First Live Kannada

Leave a comment

Your email address will not be published. Required fields are marked *