ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ? | Daali Dhananjay New Movie Hoysala Completed


ಧನಂಜಯ ಅವರು (Dhananjay) ಸ್ಯಾಂಡಲ್​​ವುಡ್​ನಲ್ಲಿ ಸಾಕಷ್ಟು ಬ್ಯುಸಿ ಇದ್ದಾರೆ. ರೌಡಿ ಆಗಿ, ಖಡಕ್ ಪೊಲೀಸ್ ಆಗಿ, ಮಿಡಲ್​ ಕ್ಲಾಸ್ ಹುಡುಗನಾಗಿ ಭಿನ್ನ ಭಿನ್ನ ಅವತಾರಗಳನ್ನು ತಾಳಿದ್ದಾರೆ. ಈಗ ‘ಹೊಯ್ಸಳ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ನೆರವೇರಿದೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ (Santosh Anandram), ‘ಕೆಜಿಎಫ್: ಚಾಪ್ಟರ್ 2’ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಚಿತ್ರದಲ್ಲಿ ಧನಂಜಯಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ (Amrutha Iyengar) ಕಾಣಿಸಿಕೊಳ್ಳುತ್ತಿದ್ದಾರೆ. ‘ಬಡವ ರಾಸ್ಕಲ್’ ಸಿನಿಮಾದಲ್ಲಿ ಈ ಜೋಡಿ ಮೋಡಿ ಮಾಡಿತ್ತು. ಹೊಸ ಸಿನಿಮಾದಲ್ಲಿ ಇವರು ಮತ್ತೆ ಒಂದಾಗಿರುವುದು ಕುತೂಹಲ ಮೂಡಿಸಿದೆ. ವಿಜಯ್ ಎನ್​. ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

TV9 Kannada


Leave a Reply

Your email address will not be published.