ಧಾರವಾಡ SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 306 ವಿದ್ಯಾರ್ಥಿಗಳಿಗೆ ಪಾಸಿಟಿವ್


ಧಾರವಾಡ: ಮಹಾಮಾರಿ ಕೊರೊನಾ ಸೋಂಕಿನಿಂದ ರಿಲೀಫ್ ಸಿಕ್ಕಿತು ಎಂದು ಕೊಳ್ಳುತ್ತಿರುವಾಗಲೇ ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಕೋವಿಡ್ 19 ಸೋಂಕು ಸ್ಫೋಟಗೊಂಡಿದೆ. ಕಾಲೇಜಿನ 306 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢವಾಗಿದೆ.

ಸತ್ತೂರು ಸಮೀಪವಿರುವ ಎಸ್​ಡಿಎಂ ಕಾಲೇಜಿನಲ್ಲಿ ಇದುವರೆಗೆ 3 ಸಾವಿರದ 973 ವಿದ್ಯಾರ್ಥಿಗಳನ್ನ ಕೋವಿಡ್​ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 306 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಕಾಲೇಜಿನಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಸೀಲ್​ಡೌನ್​ ಮಾಡಲಾಗಿದ್ದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಕಳೆದ ವಾರವಷ್ಟೇ ಕಾಲೇಜಿನಲ್ಲಿ ಗೆಟ್ ಟು ಗ್ಯಾದರ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಎನ್ನಲಾಗಿದ್ದು, ಕಾರ್ಯಕ್ರಮದಲ್ಲಿ ಹಲವು ಮೆಡಿಕಲ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ನಂತರ ಬಹಳಷ್ಟು ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ 669 ವಿದ್ಯಾರ್ಥಿಗಳಲ್ಲಿ ಸ್ವಾಬ್ ಟೆಸ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗಿತ್ತು.

News First Live Kannada


Leave a Reply

Your email address will not be published. Required fields are marked *