ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಇದರಿಂದ ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.

ಧಾರಾಕಾರ ಮಳೆಗೆ ಕುಸಿದ ರಾಷ್ಟ್ರೀಯ ಹೆದ್ದಾರಿ
ಮಡಿಕೇರಿ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸೇತುವೆಯೊಂದು ಕುಸಿದು ಬಿದ್ದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಇದರಿಂದ ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.
ಮಡಿಕೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿನ ಸೇತುವೆ ಬಿರುಕು ಬಿಟ್ಟಿದ್ದು, ಅಡಿಪಾಯವೇ ಕುಸಿತಗೊಂಡಿದೆ. ಸೇತುವೆಯ ಕೆಳಭಾಗದಲ್ಲಿ ಪ್ರವಾಹದಿಂದ ಕೆಳಭಾಗದ ಮಣ್ಣು ಕೊಚ್ಚಿ ಹೋಗಿ ಬೃಹತ್ ಹೊಂಡ ಸೃಷ್ಟಿಯಾಗಿದೆ. ಪರಿಣಾಮವಾಗಿ ಯಾವುದೇ ಕ್ಷಣದಲ್ಲಿ ಸೇತುವೆ ಕುಸಿದು ಬೀಳುವ ಹಂತಕ್ಕೆ ನಿಂತುಬಿಟ್ಟಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಒಂದೊಮ್ಮೆ ಈ ಸೇತುವೆ ಕುಸಿದು ಬಿದ್ದರೆ ಮಡಿಕೇರಿ-ಮಂಗಳೂರು-ಮೈಸೂರು ಸಂಪರ್ಕ ಕಡಿತಗೊಳ್ಳಲಿದೆ.