ಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ಬೈ ಹೇಳಿದ್ದಾರೆ. ಟಿ-20 ವಿಶ್ವಕಪ್ ಟೂರ್ನಿಯಲ್ಲಿ ನಮೀಬಿಯಾ ವಿರುದ್ಧದ ಗೆಲುವಿನೊಂದಿಗೆ ಚುಟುಕು ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ್ದಾರೆ.
5 ವರ್ಷಗಳ ನಾಯಕತ್ವದಲ್ಲಿ ಯಾವುದೇ ಐಸಿಸಿ ಟ್ರೋಫಿಯನ್ನು ತಂದುಕೊಡಲು ಸಾಧ್ಯವಾಗಲಿಲ್ಲ. SENA ರಾಷ್ಟ್ರಗಳ ವಿರುದ್ಧ ಟಿ20 ಸರಣಿ ಗೆದ್ದ ಏಕೈಕ ಭಾರತೀಯ ಎಂಬ ದಾಖಲೆ ಕೊಹ್ಲಿ ಹೆಸರಿನಲ್ಲಿದೆ. 2018ರಲ್ಲಿ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಮತ್ತು 2020ರಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದುಕೊಟ್ಟಿದ್ದಾರೆ.
2017 ರಲ್ಲಿ ಟಿ20 ತಂಡದ ಚುಕ್ಕಾಣಿ ಹಿಡಿದ ವಿರಾಟ್ ಕೊಹ್ಲಿ ಇದುವರೆಗೆ 50 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 30 ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. 4 ಪಂದ್ಯಗಳಲ್ಲಿ ಫಲಿತಾಂಶ ಮೂಡಿಬರದಿದ್ದರೆ, 16 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿತ್ತು. ಟಿ20 ಕ್ರಿಕೆಟ್ನ ಯಶಸ್ವಿ ನಾಯಕರಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
72 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ 41 ಜಯ ತಂದುಕೊಟ್ಟರೆ, 28 ಪಂದ್ಯಗಳಲ್ಲಿ ಪರಾಜಯಗೊಂಡಿದ್ದರು. ಇನ್ನು ಮೂರು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ. ಇಬ್ಬರು ನಾಯಕತ್ವದ ಗೆಲುವಿನ ಶೇಕಡಾವಾರು ಗಮನಿಸಿದರೆ, ಧೋನಿ 59.28% ಹೊಂದಿದ್ದರೆ, ಕೊಹ್ಲಿ 63.82% ಗೆಲುವು ತಂದ್ಕೊಟ್ಟಿದ್ದಾರೆ.
The post ಧೋನಿ ನಂತರ ವಿರಾಟ್ 2ನೇ ಅತ್ಯಂತ ಯಶಸ್ವಿ ನಾಯಕ -T20 ನಾಯಕತ್ವದಲ್ಲಿ ಕೊಯ್ಲಿಯೇ ಕಿಂಗ್ appeared first on News First Kannada.