ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಗೆ ಜಿಲ್ಲಾ ಹಾಲು ಒಕ್ಕೂಟಗಳು ಮನವಿ ಮಾಡಿರುವ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ದರ 3ರೂ. ಏರಿಕೆಗೆ ಕೆಎಂಎಫ್ ಚಿಂತನೆ ನಡೆಸಿದೆ ಎಂಬ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ಪ್ರಸಕ್ತ 37 ರೂ. ಇರುವ ಹಾಲಿನ ದರವನ್ನು 40 ರೂ. ಏರಿಕೆಗೆ ಚಿಂತನೆ ನಡೆದಿದ್ದು, ಹೆಚ್ಚಳ ಮಾಡುವ 3 ರೂಪಾಯಿಯಲ್ಲಿ 2 ರೂಪಾಯಿಯನ್ನು ರೈತರಿಗೆ ನೀಡುವ ಚಿಂತನೆ ಮಾಡಲಾಗಿದೆ. ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೇ ಕರ್ನಾಟಕದಲ್ಲಿ ದರ ಕಡಿಮೆ ಇದೆ ಇದೇ ಕಾರಣಕ್ಕಾಗಿ ಹಾಲಿನ ದರ ಏರಿಕೆಗೆ ಒಕ್ಕೂಟಗಳು ಪಟ್ಟು ಹಿಡಿದಿವೆ ಎನ್ನಲಾಗಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ. ಒಂದು ವಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು. ಸಿಎಂ ಒಪ್ಪಿದರೆ ಮಾತ್ರ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ತಿಳಿಸಿದ್ದಾರೆ.