ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ 2 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

ಟಿಎಂಸಿಯಿಂದ ಹೊರ ಬಂದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಭಾರೀ ಸ್ಪರ್ಧೆ ನಡೆದಿತ್ತು. ಮತಿ ಎಣಿಕೆಯ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು. ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆಯುತ್ತಿದ್ದರು.

ಸುವೇಂದು ಅಧಿಕಾರಿಯನ್ನು ನಾನು ನಂದಿಗ್ರಾಮದಿಂದ ಸೋಲಿಸುತ್ತೇನೆ ಎಂದು ಮಮತಾ ಪ್ರತಿಜ್ಞೆ ಮಾಡಿದ್ದರು. ಅದರಂತೆ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿಯನ್ನು ಸೋಲಿಸಿದ್ದಾರೆ.

ಸದ್ಯದ ಟ್ರೆಂಡ್ ಪ್ರಕಾರ ಒಟ್ಟು 292 ಸ್ಥಾನಗಳ ಪೈಕಿ 199 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆಯಲ್ಲಿದ್ದು, 84 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

The post ನಂದಿ ಗ್ರಾಮದಲ್ಲಿ ಮಮತಾಗೆ ಜಯ appeared first on Public TV.

Source: publictv.in

Source link