ನವದೆಹಲಿ: ಭಾರತದಲ್ಲಿ ಕೊರೊನಾ 2ನೇ ಅಲೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ ಎನ್ನುವ ಕಳವಳವನ್ನು ರಾಹುಲ್‍ಗಾಂಧಿ ಟ್ವೀಟ್ ಮಾಡಿದ್ದಾರೆ.

ನಗರಗಳ ಬಳಿಕ, ಹಳ್ಳಿಗಳೂ ಸೋಂಕು ಹಬ್ಬುತ್ತಿದೆ. ನಗರಗಳ ಬಳಿಕ ಈಗ ಹಳ್ಳಿಗಳೂ ಭಗವಂತನ ಕೈಯಲ್ಲಿದೆ. ಕೊರೊನಾ ಸೋಂಕು ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಕೈಗೊಂಡಿರುವ ಕ್ರಮಗಳನ್ನು ಸತತವಾಗಿ ವಿರೋಧಿಸುತ್ತಾ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೀಗೆ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊವಿಡ್19 ನಿಯಂತ್ರಣ ಸಂಬಂಧ ಮೇ 7ರಂದು ರಾಹುಲ್ ಗಾಂಧಿ ಮೋದಿಗೆ ಪತ್ರ ಬರೆದಿದ್ದರು. ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಅದನ್ನು ನಿಯಂತ್ರಿಸಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಲಸಿಕೆಗಳ ಪರಿಣಾಮಕಾರಿತ್ವ ಪರಿಶೀಲಿಸಬೇಕು. ಹಾಗೂ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ತಿಳಿಸಿದ್ದರು.

ಈ ಮೊದಲು ದೇಶದಲ್ಲಿ ಲಾಕ್‍ಡೌನ್ ಮಾಡುವುದು ಸೂಕ್ತ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಕೊರೊನಾ ವಿರುದ್ಧ ಹೋರಾಡಲು ಲಾಕ್‍ಡೌನ್ ಒಂದೇ ಅಸ್ತ್ರವಾಗಿದೆ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್‍ನಲ್ಲಿ ಹೇಳಿದ್ದರು

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ ಸುಮಾರು 24 ಜನ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕೈ ನಾಯಕ ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ಕೊರತೆ ವಿಚಾರ ದೆಹಲಿ ಅಂಗಳಕ್ಕೆ ತಲುಪಿದ್ದು, ಇದು ಸಾವುಗಳೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಕೊರೊನಾ ಕುರುತಾಗಿ ಸರ್ಕಾರಕ್ಕೆ ಪ್ರಶ್ನಿಸುತ್ತಾ ಮತ್ತು ಜಾಗೃತಿಯನ್ನು ಮೂಡಿಸುತ್ತಾ ಟ್ವೀಟ್ ಮಾಡುತ್ತಲೇಬಂದಿದ್ದಾರೆ.

The post ನಗರಗಳ ಬಳಿಕ ಈಗ ಹಳ್ಳಿಗಳೂ ಭಗವಂತನ ಕೈಯಲ್ಲಿದೆ : ರಾಹುಲ್ ಗಾಂಧಿ appeared first on Public TV.

Source: publictv.in

Source link