ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಜಿಸಿಬಿ ನಾರಾಯಣನ ಕೊಲೆಗೆ ಸಿನಿಮೀಯ ರೀತಿಯಲ್ಲಿ ಸ್ಕೆಚ್ ಹಾಕಿ ಅಟ್ಯಾಕ್ ಮಾಡಿರುವ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಕೂದಲೆಳೆ ಅಂತರದಲ್ಲಿ ಜೆಸಿಬಿ ನಾರಾಯಣ ಪ್ರಾಣಾಪಾಯದಿಂದ ಪಾರಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಿನಿಮೀಯ ರೀತಿಯಲ್ಲಿ ಎಸ್ಕೇಪ್
ಜಿಸಿಬಿ ನಾರಾಯಣ ಹುಳಿಮಾವು ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದಾನೆ. ಈತ ಡಿಎಲ್ಎಫ್ ರಸ್ತೆಯಲ್ಲಿ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ಗುಂಪು ಈತನ ಕಾರನ್ನ ತಡೆದು ಅಟ್ಯಾಕ್ ಮಾಡಿದೆ. ಕಾರು ಅಡ್ಡಗಟ್ಟಿ ಹಲ್ಲೆಗೆ ಮುಂದಾಗಿತ್ತು, ಅಪಾಯವನ್ನರಿತ ಜೆಸಿಬಿ ನಾರಾಯಣ, ಕಾರನ್ನ ರಿವರ್ಸ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ.
ನಾಲ್ಕೈದು ಜನ ದುಷ್ಕರ್ಮಿಗಳ ಚಲನವಲನಗಳು ಸಿಸಿ ಕ್ಯಾಮಾರದಲ್ಲಿ ಸೆರೆ ಆಗಿದೆ. ಪ್ರಕರಣ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಹಾಗೂ ದೂರನ್ನ ಆಧರಿಸಿ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.