ತುಮಕೂರು: ಬ್ರಾಹ್ಮಣ ಸಮುದಾಯದ ವಿರುದ್ದ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ನಟ ಚೇತನ್ ವಿರುದ್ದ ಕುಣಿಗಲ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಚೇತನ್ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯದ ಗೌರವಕ್ಕೆ ಧಕ್ಕೆ ಉಂಟಾಗಿದೆ. ಅವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನ ಮಾಡಿದ್ದಾರೆ ಎಂದು ಶ್ರೀರಾಮ ಸೇವಾ ಮಂಡಳಿ ಹಾಗೂ ಬ್ರಾಹ್ಮಣ ಸಂಘ ದೂರು ನೀಡಿದೆ. ಕೂಡಲೆ ನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಅಂದ್ಹಾಗೆ ಇದೇ ವಿಚಾರವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ಈಗಾಗಲೇ ಚೇತನ್ ವಿರುದ್ಧ ಪ್ರಕರಣ ದಾಖಲಾಗಿದೆ. ಬ್ರಾಹ್ಮಣರು ಭಯೋತ್ಪಾದಕರು ಎಂದು ಹೇಳಿದ್ದ ವಿಡಿಯೋವನ್ನ ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದರು. ಹೀಗಾಗಿ ಈ ಹೇಳಿಕೆಗೆ ಬ್ರಾಹ್ಮಣ ಸಮುದಾಯ ಕೆಂಡಾಮಂಡಲವಾಗಿದ್ದಾರೆ. ವಿಪ್ರ ಯುವ ವೇದಿಕೆ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐಪಿಸಿ 153(B) 295(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

The post ನಟ ಚೇತನ್ ವಿರುದ್ದ ಕುಣಿಗಲ್ ಠಾಣೆಯಲ್ಲಿ ದೂರು ದಾಖಲು appeared first on News First Kannada.

Source: newsfirstlive.com

Source link