ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಬ್ರೇನ್ ಸ್ಟ್ರೋಕ್ ಆದ ಕಾರಣ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮನವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ದಿನನಿತ್ಯ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ತಂದೆ-ತಾಯಿಯನ್ನು ರಕ್ಷಿಸಿಕೊಂಡ ದುನಿಯಾ ವಿಜಯ್​ ಭಾವನಾತ್ಮಕ ಸಂದೇಶ

ಕೆಲ ದಿನಗಳ ಹಿಂದಷ್ಟೇ ಕೋವಿಡ್​ನಿಂದ ದುನಿಯಾ ವಿಜಯ್ ತಾಯಿ ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ಅವರ ಆರೋಗ್ಯ ಹದಗೆಟ್ಟಿತ್ತು. ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದೇನೆ ಎಂದು ವಿಜಯ್ ಹೇಳಿದ್ರು.

The post ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ವಿಧಿವಶ appeared first on News First Kannada.

Source: newsfirstlive.com

Source link