ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದರು.

ಭೇಟಿ ಬಳಿಕ ಟ್ವೀಟ್ ಮಾಡಿರುವ ವಿಜಯೇಂದ್ರ.. ಇಂದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ವೇಳೆ ‘ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಕಾರ್ಯಕರ್ತರು ಜನರ ದುಃಖ-ದುಮ್ಮಾನಗಳಿಗೆ ಸ್ಪಂದಿಸಬೇಕಾದ ರೀತಿಯ ಕುರಿತು ಅವರಿಂದ ಪಡೆದ ಸಲಹೆ, ಮಾರ್ಗದರ್ಶನ ನನ್ನಲ್ಲಿ ಇನ್ನಷ್ಚು ಉತ್ಸಾಹ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದಿದ್ದಾರೆ.

ಇತ್ತೀಚೆಗೆ ವಿಜಯೇಂದ್ರ ಹೈಕಮಾಂಡ್​ ನಾಯಕರನ್ನ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟ ಪುನರ್​ ರಚನೆಗೆ ಬಿಜೆಪಿ ನಾಯಕರು ಒಪ್ಪಿಗೆ ನೀಡಿದ್ದಾರೆ ಅನ್ನೋ ಮಾಹಿತಿ ಇದೆ. ಇದರ ಜೊತೆಗೆ ಬಿಜೆಪಿಯ ಕೆಲವು ನಾಯಕರು ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿ ಹೈಕಮಾಂಡ್​ ಬಳಿ ದೂರು ನೀಡಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ವಿಜಯೇಂದ್ರ ಇಂದು ಜೆಪಿ ನಡ್ಡಾರನ್ನ ಭೇಟಿಯಾಗಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

The post ನಡ್ಡಾ ಭೇಟಿಯಾದ ವಿಜಯೇಂದ್ರ.. ರಾಜ್ಯ ಬಿಜೆಪಿ ವಲಯದಲ್ಲಿ ಮತ್ತೆ ಬಿಸಿ ಬಿಸಿ ಚರ್ಚೆ appeared first on News First Kannada.

Source: newsfirstlive.com

Source link