ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಮಾಧ್ಯಮಗಳಿಗೆ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಸಂತೋಷ್ | Contract Santhosh sent a suicide message to the media saying that Minister KS Eshwarappa was responsible for my death


ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಮಾಧ್ಯಮಗಳಿಗೆ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಸಂತೋಷ್

ಮೃತ ಸಂತೋಷ್, ಸಚಿವ ಕೆಎಸ್​ ಈಶ್ವರಪ್ಪ

ಬೆಳಗಾವಿ: ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರೇ (KS Eshwarappa) ಕಾರಣ ಎಂದು ಗುತ್ತಿಗೆದಾರ (Contractor) ಸಂತೋಷ್​ ಮಾಧ್ಯಮಗಳಿಗೆ ಆತ್ಮಹತ್ಯೆ ಸಂದೇಶವನ್ನು ಕಳುಹಿಸಿ, ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ . ವಾಟ್ಸಾಪ್ ಮೂಲಕ ಮೆಸೇಜ್ ಮಾಡಿರುವ ಸಂತೋಷ್, ನನ್ನ ಪತ್ನಿ, ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. ನನ್ನ ಸಾವಿಗೆ ಸ್ನೇಹಿತರು ಕಾರಣರಲ್ಲ. ಸ್ನೇಹಿತರೊಂದಿಗೆ ನಾನು ಪ್ರವಾಸದಲ್ಲಿದ್ದ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಮೆಸೇಜ್​ನಲ್ಲಿ ತಿಳಿಸಿದ್ದಾರೆ. 

ನನ್ನ ಸಾವಿಗೆ ನೇರ ಕಾರಣ ಕೆಎಸ್ ಈಶ್ವರಪ್ಪ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿಎಸ್​ ಯಡಿಯೂರಪ್ಪನವರು ಸಹಾಯ ಹಸ್ತ ನೀಡಬೇಕು. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು ಎಂದು ಸಂತೋಷ್ ಮಾಧ್ಯಮಕ್ಕೆ ಸಂದೇಶ್ ಕಳುಹಿಸಿದ್ದಾರೆ.

ನನ್ನ ಗೆಳಯರನ್ನು ಪ್ರವಾಸ ಹೋಗೋಣ ಅಂತ ನನ್ನ ಜೊತೆಗೆ ಕಳೆದುಕೊಂಡ ಬಂದಿದ್ದೇನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೇ ಸಂಬಂಧ ಇರಲ್ಲ ಅಂತ ಸಂತೋಷ್ ಮೆಸೇಜ್ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಿ. ಬಡಸ ಗ್ರಾಮ ಬಿಟ್ಟು ಬೆಳಗಾವಿ ನಗರಕ್ಕೆ ಬಂದು ನೆಲೆಸಿದ್ದರು. ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಒಂದೂವರೆ ವರ್ಷದ ಮಗು ಇದೆ.

ವಿಧಿ ವಿಜ್ಞಾನ ತಂಡ ಆಗಮನ:
ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಶಾಂಭವಿ ಲಾಡ್ಜ್​​ಗೆ ಎಸ್​ಪಿ ಹಾಗೂ ಎಎಸ್​​ಪಿ ಭೇಟಿ ನೀಡಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ತಂಡ ಆಗಮಿಸಲಿದೆ.

TV9 Kannada


Leave a Reply

Your email address will not be published. Required fields are marked *